ಜನನಿ ಸುರಕ್ಷಾ ಯೋಜನೆಯ ಉದ್ದೇಶ ಮತ್ತು ಪಡೆಯಲು ಇರುವ ಅರ್ಹತೆಗಳೇನು? ಉತ್ತರ : ಈ ಯೋಜನೆಯನ್ನು ಬಡತನ ರೇಖೆಗಿಂತ ಕೆಳಗಿನ ಆದಾಯವಿರುವ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ತಾಯಿ ಮತ್ತು ಮಕ್ಕಳ ಮರಣವನ್ನು ತಗ್ಗಿಸಲು ಹಮ್ಮಿಕೊಳ್ಳಲಾಗಿದೆ. ಯೋಜನೆಯ ಫಲಾನುಭವಿಗಳಿಗೆ ಇರಬೇಕಾದ ಅರ್ಹತೆ: ಬಿ.ಪಿ.ಎಲ್. ಕುಟುಂಬದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗರ್ಭಿಣಿಯರು. ಅವರುಗಳ ವಯಸ್ಸು ಕನಿಷ್ಟ 19 ವರ್ಷ ಆಗಿರಬೇಕು. ಈ ಸೌಲಭ್ಯ ಮೊದಲ ಎರಡು ಸಜೀವ ಜನನಗಳಿಗೆ ಮಾತ್ರ ಮೀಸಲು. ಬಿ.ಪಿ.ಎಲ್. ಕಾರ್ಡ್ ಹೊಂದಿರಬೇಕು ಅಥವಾ ಅವರ ಕುಟುಂಬದ ವಾರ್ಷಿಕ ಆದಾಯ ರೂ.17,000/- ಗಳಿಗಿಂತ ಕಡಿಮೆ ಎಂದು ದೃಢೀಕರಣ ಪತ್ರ ನೀಡಬೇಕು. ಸಹಾಯ ಧನ ರಾಷ್ಟ್ರೀಯ ಮಾತೃತ್ವ ಹಿತದೃಷ್ಠಿಯ ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶಗಳ ಫಲಾನುಭವಿಗಳಿಗೆ ಈ ಕೆಳಗಿನಂತೆ ನಗದು ಸಹಾಯವನ್ನು ನೀಡಲಾಗುವುದು. ವಿವರ ಗ್ರಾಮೀಣ ಪ್ರದೇಶಗಳ ಫಲಾನುಭವಿಗಳಿಗೆ ರೂ. ನಗರ ಪ್ರದೇಶಗಳ ಫಲಾನುಭವಿಗಳಿಗೆ ರೂ. ಮನೆಯಲ್ಲೇ ನಡೆಯುವ ಮೊದಲ ಎರಡು ಹೆರಿಗೆಗಳಿಗೆ (ಪ್ರತಿ ಹೆರಿಗೆಗೆ) -ಸಜೀವ ಜನನ ಆಗಿರಬೇಕು. 500/- 500/- ಆರೋಗ್ಯ ಸಂಸ್ಥೆಯಲ್ಲಿ ನಡೆಯುವ ಮೊದಲ ಎರಡು ಹೆರಿಗೆಗಳಿಗೆ (ಪ್ರತಿ ಹೆರಿಗೆಗೆ) -ಸಜೀವ ಜನನ ಆಗಿರಬೇಕು. 700/- 600/- ಖಾಸಗಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಆದಲ್ಲಿ (ಪ್ರತಿ ಪ್ರಕರಣಕ್ಕೆ) 1500/- 1500/- ಈ ಸೌಲಭ್ಯ ಪಡೆಯಲು ಗರ್ಭಿಣಿಯರು ಆರೋಗ್ಯ ಕಾರ್ಯಕರ್ತೆಯರಲ್ಲಿ ನೋಂದಾಯಿಸಿಕೊಳ್ಳಬೇಕು. ಕಡೇ ಪಕ್ಷ ಮೂರು ಬಾರಿ ಪರೀಕ್ಷೆ ಮಾಡಿಸಿಕೊಂಡಿರಬೇಕು. ಹೆರಿಗೆಗೆ ಮೊದಲ ಎರಡು ಬಾರಿ ಧನುರ್ವಾಯು ಲಸಿಕೆ ಮತ್ತು ಕಬ್ಬಿಣಾಂಶ ಮಾತ್ರೆಗಳನ್ನು ಪಡೆದುಕೊಂಡಿರಬೇಕು. ಮೂಲ : ಕುಟುಂಬ ವಾರ್ತೆ